ಚಿಂತಾಮಣಿ ತಾಲೂಕು ಸಿದ್ದೇಪಲ್ಲಿ ಕ್ರಾಸ್ ನಲ್ಲಿರುವ ಇತಿಹಾಸ ಪ್ರಸಿದ ಜೇಷ್ಟಾದೇವಿ ಸಮೇತ ಶ್ರೀ ಶನೇಶ್ವರಸ್ವಾಮಿ ದೇವಾಲಯದಲ್ಲಿ ಕಡೇ ಶ್ರಾವಣ ಶನಿವಾರದ ಪ್ರಯುಕ್ತ ಆದ್ದೂರಿಯಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು, ಕಡೇ ಶ್ರಾವಣ ಶನಿವಾರದ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಶನೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ಸ್ವಾಮಿಯವರ ದರ್ಶನ ಪಡೆದು ಪುನೀತರಾದರು.