ಕುಶಾಲನಗರ; ಪೌಷ್ಟಿಕ ಸಮತೋಲನ ಆಹಾರ ಸೇವನೆಯಿಂದ ಗರ್ಭಿಣಿ ಮತ್ತು ಮಗು ಇಬ್ಬರು ಆರೋಗ್ಯವಂತರಾಗಿರಲು ಸಾಧ್ಯ ಎಂದು ಕೂಡಿಗೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಿಕಾ ಮೂರ್ತಿ ತಿಳಿಸಿದರು.ಪಟ್ಟಣದ ಗುಮ್ಮನಕೊಲ್ಲಿಯ ವಿನಾಯಕ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನೆ ಇವರ ಆಶ್ರಯದಲ್ಲಿ ಗರ್ಭಿಣಿ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಸೀಮಂತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಗರ್ಭಿಣಿಯರ ದೈಹಿಕ ಆರೋಗ್ಯದ ಹಿನ್ನೆಲೆಯಲ್ಲಿಈ ಕಾರ್ಯಕ್ರಮ ಆಯೋಜಿಸುತ್ತಿದ್ದು, ಮಾನಸಿಕ ಆರೋಗ್ಯದ ಕಡೆಗೂ ಅತಿ ಹೆಚ್ಚಿನ ಗಮನ ಕೊಡಬೇಕಿದೆ. ಗರ್ಭಿಣಿಯರು ಧನಾತ್ಮಕವಾಗಿ, ಉತ್ತಮ ಆಲೋಚನೆ ಹೊಂದಬೇಕು. ಶಾಂತಿಯಿಂದ ಧ್ಯಾನ, ಶ್ಲೋಕ ಹೇಳಿಕೊಂಡಲ್