ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಅನ್ಯಾಯ ಆಗಿದೆ ಅಂತ ಸಮುದಾಯದ ಜನರು ಪ್ರತಿಭಟನೆ ನಡೆಸಿದರು. ನಗರದ ರಾಣಿ ಚೆನ್ನಮ್ಮ ಸರ್ಕಲ್ ನಿಂದ ಆರಂಭವಾದ ಪ್ರತಿಭಟನೆ ಮುಳಗುಂದ ನಾಕಾ, ಕೋರ್ಟ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಇದೇ ವೇಳೆ ಅಲೆಮಾರಿ ಸಮುದಾಯದ ಜನರು ತಮ್ಮ ವೃತ್ತಿಯ ಜೊತೆಗೆ ಸಾಂಪ್ರದಾಯಿಕ ಉಡುಗೆಗಳೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.