ಹನೂರು ಪಟ್ಟಣದ ಕೊಳ್ಳೆಗಾಲ ರಸ್ತೆಯ ಆಗ್ನಿಶಾಮಕ ದಳ ಕಚೇರಿಯ ಸಮೀಪದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಓರ್ವನು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಭವಿಸಿದೆ. ಹನೂರು-ಕೊಳ್ಳೆಗಾಲ ರಸ್ತೆ ಮಾರ್ಗದಲ್ಲಿ ಬೈಕ್‌ನಲ್ಲಿ ಸಾಗುತ್ತಿದ್ದ ಸೈಯದ್ ರಿಯಾಜ್ ಎಂಬಾತನೂ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆಮೇಲೆ ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಹನೂರು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಗೊಂಡ ವ್ಯಕ್ತಿಯನ್ನು ತಮ್ಮ ಪೊಲೀಸ್ ವಾಹನದಲ್ಲಿಯೇ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ರವಾನಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.