ಹಾಸನ: ನಗರದ ಆರ್.ಸಿ.ರಸ್ತೆ, ಗಂಧದ ಕೋಠಿ ಆವರಣದಲ್ಲಿರುವ ಬಾಲಕಿಯರ ವಿಭಜಿತ ಸರ್ಕಾರಿ ಪದವಿ ಕಾಲೇಜು ಮುಂಭಾಗ ಸುಮಾರು 50 ರಿಂದ 55 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಪಂಚೆ, ಬಿಳಿ ಶರ್ಟ್ ಧರಿಸಿದ್ದ ಮತ್ತು ತಲೆಗೆ ಟವೆಲ್ ಕಟ್ಟಿಕೊಂಡಿದ್ದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಆತ ಹಾಸನ ಹತ್ತಿರದ ಯಾವದೋ ಹಳ್ಳಿಯವನಾಗಿರುವ ಸಾಧ್ಯತೆ ವ್ಯಕ್ತವಾಗಿದೆ.ಕಸ ಗುಡಿಸಲು ತೆರಳಿದ್ದ ಪೌರಕಾರ್ಮಿಕರು ಶವವನ್ನು ಕಂಡು ತಕ್ಷಣವೇ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ತನಿಖೆ ಆರಂಭವಾಗಿದೆ.