ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಪಿ ಎಸ್ ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಕುರಿತು ಮಾಹಿತಿ ಭಾನುವಾರ ಲಭ್ಯವಾಗಿದೆ. ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಸಾಗರ ರಸ್ತೆಯ ಕಾಲೇಜು ಮುಂಭಾಗದಲ್ಲಿರುವ ಮೀನಾಕ್ಷಿ ಅಮ್ಮ ಎಂಬುವವರ ಮನೆ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ 8 ಕ್ವಿಂಟಲ್ 76ಕೆಜಿ ಅಕ್ಕಿ ದಾಸ್ತಾನು ಮಾಡರುವುದು ಪತ್ತೆಯಾಗಿದೆ. ಈ ವೇಳೆ ಕೆಂಚನಾಲ ಗ್ರಾಮದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.