ಹುಬ್ಬಳ್ಳಿ: ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಹೆಣ್ಣುಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ನಟಿ ಸಂಜನಾ ಗಾಲ್ತಾಣಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿ ನಗರದಲ್ಲಿಂದು ಮಾತಾನಾಡಿದ ಅವರು ಇವತ್ತಿನ ಬೆಳವಣಿಗೆಗಳನ್ನು ನೋಡಿದ್ರೆ ಮನಸ್ಸಿಗೆ ತುಂಬಾ ನೋವಾಗುತ್ತಿದೆ. ಇದರಲ್ಲಿ ರಾಜಕೀಯ ನಡೆಯುತ್ತಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಅನ್ಯಾಯವಾದವರಿಗೆ ನ್ಯಾಯ ದೊರಕಬೇಕು ಎಂಬುದು ನನ್ನ ಆಗ್ರಹ ಎಂದು ಸಂಜನಾ ಹೇಳಿದರು