ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಐಯನ ಕೆರೆಯಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಹೊಸಪೇಟೆ ಗ್ರಾಮದ ನಿವಾಸಿ 16 ವರ್ಷದ ರುದ್ರೇಶ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.