ಕೋಲಾರ, ಆ.೨೬ ಪ್ರತಿಯೊಬ್ಬರಿಗೂ ಜೀವನದಲ್ಲಿ ಸಮಸ್ಯೆಗಳು ಬರುವುದು ಸಹಜ. ಅವುಗಳ ಬಗ್ಗೆ ಆಲೋಚಿಸುತ್ತ ಕೂರುವ ಬದಲು, ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿದಾಗಲೇ ಜೀವನಕ್ಕೊಂದು ಅರ್ಥ ಬರುತ್ತದೆ ಎಂದು ಜಿ.ಪಂ ಸಿಇಓ ಡಾ.ಪ್ರವೀಣ್ ಪಿ ಬಾಗೇವಾಡಿ ಹೇಳಿದರು. ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸಿಸಿಟಿವಿ ಇನ್ಸ್ಟಾಲೇಶನ್ ಮತ್ತು ಸರ್ವೀಸ್ ಹಾಗೂ ಲಘು ವಾಹನಾ ಚಾಲನಾ ತರಬೇತಿ ಮತ್ತು ಎಂಬ್ರಾಯಿಡರಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಇಂದು ಮಹಿಳೆಯರು ಕೂಡ ಶಿಕ್ಷಣ, ಉದ್ಯೋಗ, ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಎಲ್ಲಾ ರಂಗಗಳಲ್ಲೂ ಸಾಧನೆ ಮಾಡಿ