ಅಂಗವಿಕಲರ ಓಡಾಟದ ಅನುಕೂಲಕ್ಕಾಗಿ ಸರ್ಕಾರ ಉಚಿತವಾಗಿ ನೀಡುವ ಯಂತ್ರಚಾಲಿತ ತ್ರಿಕಚ್ರ ವಾಹನವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಜಾಗರೂಕತೆಯಿಂದ ಚಲಾಯಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. ದಾವಣಗೆರೆ ನಗರದ ಹಳೆಯ ಪ್ರವಾಸಿ ಮಂದಿರದ ಆವರಣದಲ್ಲಿ ಶನಿವಾರ ಸಂಜೆ 4 ಗಂಟೆಗೆ 2024-25ನೇ ಸಾಲಿನ ರಾಜ್ಯ ಹಣಕಾಸು ಆಯೋಗ ಆನಿರ್ಬಂಧಿತ ಅನುದಾನದಡಿ ದಾವಣಗೆರೆ ತಾಲೂಕು ಪಂಚಾಯತ್ ವತಿಯಿಂದ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ಸಂಚಾರ ನಿಯಮಗಳ ಕುರಿತು ಹೆಚ್ಚಿನ ಅರಿವು ಪಡೆಯುವ ಮೂಲಕ ಸುರಕ್ಷಿತ ಹಾಗೂ ಜಾಗರೂಕತೆಯ ಚಾಲನೆಗೆ ಆದ್ಯತೆ ನೀಡಬೇಕು. ವೇಗಮಿತಿ ಕಡೆಯೂ ಹೆಚ್ಚಿನ ಗಮನ ಹರಿಸಬೇಕು ಎಂದರು.