ವಿಜಯಪುರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ನಗರದ ಗಾಂಧಿ ಚೌಕ್ ನಲ್ಲಿ ಮುಸ್ಲಿಂ ಬಾಂಧವರಿಂದ ಭವ್ಯ ಮೆರವಣಿಗೆ ನಡೆಯಿತು. ಶುಕ್ರವಾರ ಸಾಯಂಕಾಲ 5ಗಂಟೆ ಸುಮಾರಿಗೆ ನಗರದ ಗಾಂಧಿ ಚೌಕ್‌ನಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಸಿದರು. ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಜಗತ್ತಿಗೆ ಶಾಂತಿ ಸಂದೇಶ ಸಾರಿದವರು ಎಂದು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಭವ್ಯ ಮೆರವಣಿಗೆಯು ನಗರದ ಗಾಂಧೀ ಚೌಕದಿಂದ ಬಸವೇಶ್ವರ ಸರಕಲ ಮಾರ್ಗವಾಗಿ ಜುಮ್ಮಾ ಮಸೀದಿ ಅವರಿಗೂ ಜರುಗಿತು. ಮೆರವಣಿಗೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಭಾಗಿಯಾಗಿದ್ದರು.