ಮದ್ದೂರಿನ ಗಣೇಶೋತ್ಸವ ಸಮಯದಲ್ಲಿ ಕಲ್ಲು ತೂರಾಟ ವಿಚಾರಕ್ಕೆ ಸಂಬಂಧಿಸಿ ಸೋಮವಾರ ಮಧ್ಯಾಹ್ನ 2:30 ರ ಸುಮಾರಿಗೆ ಕಾವೇರಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ ಅವರು ನೆನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ.ವಿಚಾರಣೆ ನಡೆಸಿ ನಂತರ ಇಪ್ಪತ್ತೊಂದು ಜನರನ್ನು ಬಂಧಿಸಲಾಗಿದೆ. ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ. ಆದ್ರೆ ಬಿಜೆಪಿ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡ್ತಾ ಇದಾರೆ. ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು,ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿ ನಡೆದಿದೆ