ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಹೋಬಳಿಯ ಎನ್. ಗಣೇಕಲ್, ಮಸೀದಾಪುರ ರಸ್ತೆ ಬಳಿ ಶುಕ್ರವಾರ ಸಾಯಂಕಾಲ ಆಟೋದಲ್ಲಿ ಸಾಗಿಸುತ್ತಿದ್ದ ಅನ್ನಭಾಗ್ಯ ಯೋಜನೆಯ ಅಕ್ರಮ ಅಕ್ಕಿ ಸಾಗಣೆ ವೇಳೆ ಅಧಿಕಾರಿಗಳು ದಾಳಿ ನಡೆಸಿ 11.65 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ವಿವಿಧ ಗ್ರಾಮಗಳಲ್ಲಿ ಜನರಿಂದ ಪಡಿತರ ಅಕ್ಕಿ ಖರೀದಿಸಿ ಕಾಳ ಸಂಖ್ಯೆಯಲ್ಲಿ ಮಾರಾಟ ಮಾಡಲು ಅಕ್ಕಿಯನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಸಾರ್ವಜನಿಕರ ದೂರಿನ ಮೇರೆಗೆ ಆಹಾರ ನಿರೀಕ್ಷಕ ಅಹಮದ್ ಮತ್ತು ಗಬ್ಬೂರ ಠಾಣೆ ಪಿಎಸ್ಐ ಅರುಣ್ ಕುಮಾರ್ ರಾಠೋಡ್ ನೇತೃತ್ವದಲ್ಲಿ ದಾಳಿ ನಡೆಸಿದಾಗ 32 ಸಾವಿರ ರೂಪಾಯಿ ಮೌಲ್ಯದ ಅಕ್ಕಿ ಆಟೋ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಗಬ್ಬೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.