ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ತುಳಸಿಗಿರೀಶ ಫೌಂಡೇಶನ್ ವತಿಯಿಂದ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬುಧುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡ ಬಾಬು ರಾಜೇಂದ್ರ ನಾಯಕ ಚಾಲನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ದಲಿತ ಸಂಘರ್ಷ ಸಮಿತಿ ಹಾಗೂ ತುಳಸಿ ಗಿರೀಶ್ ಫೌಂಡೇಶನ್ ವತಿಯಿಂದ ಪೌರಕಾರ್ಮಿಕರಿಗಾಗಿ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರ ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿದರು. ಡಿಎಸ್ಎಸ್ ಮುಖಂಡರು ಹಾಗೂ ಪೌರಕಾರ್ಮಿಕರು ಭಾಗಿಯಾಗಿದ್ದರು.