ಹೆಂಡ್ತಿಯ ಬರ್ಬರ ಹತ್ಯೆ ಮಾಡಿ ಬಾವಿಗೆ ಎಸೆದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗಣಿಹಾರ ಗ್ರಾಮದಲ್ಲಿ ನಡೆದಿದೆ. ನೀಲಮ್ಮ ಆನಗೊಂಡ(46) ಕೊಲೆಯಾದ ಮಹಿಳೆ ಆಕೆಯ ಪತಿ ಪರಮಾನಂದ ಹರಿತವಾದ ಆಯುಧದಿಂದ ಕತ್ತರಿಸಿ, ಬಾವಿಗೆ ಎಸೆದು ಪರಾರಿಯಾಗಿದ್ದಾನೆ ನೀಲಮ್ಮ ಜಮೀನಿನಲ್ಲಿನ ಮೆಕ್ಕೆಜೋಳಕ್ಕೆ ಹಂದಿಗಳ ಹಾವಳಿ ಇರುವುದರಿಂದ ಪಟಾಕಿ ಸಿಡಿಸಲು ಹೋದ ಸಂದರ್ಭದಲ್ಲಿ ಅವಳ ಬೆನ್ನತ್ತಿ ಹೋದ ಗಂಡ ಪರಮಾನಂದ ಅವಳನ್ನು ಕತ್ತರಿಸಿ ಹತ್ಯೆ ಮಾಡಿದ್ದಾನೆ. ಅರ್ಧ ದೇಹವನ್ನು ಬಾವಿಯಲ್ಲಿ ಎಸೆದು ಇನ್ನರ್ಧ ಭಾಗದ ಹುಡುಕಾಟ ನಡೆದಿದೆ ಎಂದು ಪೊಲೀಸರ ಮಾಹಿತಿ ನೀಡಿದರು. ಕೊಲೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಮಂಗಳವಾರ ಸಾಯಂಕಾಲ 5ಗಂಟೆ ಸುಮಾರಿಗೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.