ಕೇಂದ್ರ ಸರ್ಕಾರ ಕಾರ್ಮಿಕ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವುದ್ದನು ವಿರೋಧಿಸಿ ಸೆಪ್ಟೆಂಬರ್ 4ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಎಐಟಿಯು ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗುವುದು. ಪ್ರತಿಭಟನೆಗೆ ವಿಜಯಪುರ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯ ಕಾರ್ಮಿಕರು ಭಾಗಿಯಾಗಲಿದ್ದಾರೆ ಎಂದು ವಿಜಯಪುರದಲ್ಲಿ ಶನಿವಾರ ಸಾಯಂಕಾಲ 5ಗಂಟೆ ಸುಮಾರಿಗೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಬಿರಾದರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು. ಕೇಂದ್ರ ಸರ್ಕಾರದ ಈ ಧೋರಣೆಯನ್ನು ಖಂಡಿಸಿ ದೇಶದ ನಾನಾ ರಾಜ್ಯಗಳಿಂದ ಸುಮಾರು 10ಲಕ್ಷಕ್ಕೂ ಅಧಿಕ ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.