ಮದ್ದೂರು ಪಟ್ಟಣದಲ್ಲಿ ಕಳೆದ ಭಾನುವಾರ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟದಿಂದ ಉಂಟಾದ ಗಲಭೆಯ ಹಿನ್ನೆಲೆಯಲ್ಲಿ ಮದ್ದೂರು ಟೌನ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿಸಿದ್ದು, ಘಟನೆಯ ಸಂದರ್ಭದಲ್ಲಿ ಶಿವಕುಮಾರ್ ಸ್ಥಳದಲ್ಲಿ ಇರದಿರುವುದು ಅವರ ಅಮಾನತಿಗೆ ಕಾರಣವಾಗಿದೆ.