ನಗರದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸುರೇಶ್ ಗೌಡ, ಜ್ಯೋತಿ ಗಣೇಶ್ ತುಮಕೂರಿನಲ್ಲಿ ಶುಕ್ರವಾರ ಸಂಜೆ 5 ಗಂಟೆಯಲ್ಲಿ ಹೆಸರಾಂತ ವಿಶ್ವ ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲಾಯಿತು. ಈ ವೇಳೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ನಗರ ಶಾಸಕರಾದ ಜ್ಯೋತಿ ಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಸೇರಿದಂತೆ ಹಲವರು ವಿವಿಧ ಕಲಾ ತಂಡಗಳ ವಾದ್ಯಗಳಿಗೆ ಕುಣಿದು ಕುಪ್ಪಳಿಸಿದ್ದಾರೆ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿ, ಈ ಉತ್ಸಾಹದಲ್ಲಿ ಹೆಜ್ಜೆ ಹಾಕಿದರು. ವಿಶೇಷವಾಗಿ ಶಾಸಕ ಸುರೇಶ್ ಗೌಡರು ಸಂಭ್ರಮದಿಂದ ಕುಣಿದಾಡಿದರು.