ಹಿಂದೂ ಮಹಾ ಸಭಾ ಗಣಪತಿ ವಿಸರ್ಜನೆ ಮತ್ತು ಈದ್ ಮಿಲಾದ್ ಹಬ್ಬಗಳು ಒಟ್ಟುೊಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು. ಎಸ್ಪಿ ವಿಕ್ರಂ ಅಮಟೆ, ಹೆಚ್ಚುವರಿ ಎಸ್ಪಿ ಸಿಟಿ ಜಯಕುಮಾರ್ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯ ಪೊಲೀಸರು ತರೀಕೆರೆ ಪಟ್ಟಣದ ಆದ್ಯಂತ ಸಂಚರಿಸಿ ಕಾನೂನು ಸುವ್ಯವಸ್ಥಿತ ಕಾಪಾಡಲು ಸಿದ್ಧ ಎನ್ನುವ ಸಂದೇಶ ರವಾನೆ ಮಾಡಿದರು.