ಕೇಂದ್ರ ಸರ್ಕಾರದಿಂದ ಜಿಎಸ್ ಟಿ ಸರಳೀಕರಣ ಹಿನ್ನೆಲೆ, ವಿಧಾನಸೌಧದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅರಕಲಗೂಡು ಶಾಸಕ ಎ. ಮಂಜು ಅವರು ಮಾಧ್ಯಮಗಳ ಜೊತೆ ಮಾತನಾಡಿ, ಬೀದಿ ವ್ಯಾಪಾರಿಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮಾಡಿದ್ದಾರೆ ಅಂತಾ ಅನ್ನಿಸುತ್ತದೆ. ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನೋಂದಣಿ ಮಾಡಿರುವ ಎಲ್ಲರಿಗೂ ಇದರಲ್ಲಿ ಸೌಕರ್ಯ ಸಿಕ್ಕಿದೆ. ಕೇಂದ್ರ ಸರ್ಕಾರದ ದೂರಾಲೋಚನೆಯನ್ನು ಸ್ವಾಗತಿಸುತ್ತೇನೆ ಎಂದರು.