ಮಹಿಳೆಯೊಬ್ಬರು ವಾಹನದ ಜತೆ ಗುಂಡಿಗೆ ಬಿದ್ದು ಮೃತಪಟ್ಟ ಪ್ರಕರಣ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಮೆರವಣಿಗೆ ಹಾಗೂ ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಯತ್ನ ನಡೆಯಿತು. ಪ್ರತಿಭಟನೆಯ ವೇಳೆ ಅಣುಕು ಮೃತದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ಸಿಗರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.