ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಸೆ. 13 ರಂದು ನೆರವೇರಲಿದ್ದು, ಸುಮಾರು 4 ಲಕ್ಷಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಯಾವುದೇ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತುರ್ತು ಸ್ಪಂದನಾ ತಂಡವನ್ನು ನೇಮಿಸಿ, ನಿಯೋಜಿಸಲಾಗುವುದು ಎಂದು ಡಿಸಿ ಟಿ. ವೆಂಕಟೇಶ್ ತಿಳಿಸಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸೆ. 13 ರಂದು ನಗರಕ್ಕೆ ಸುಮಾರು 4 ಲಕ್ಷಕ್ಕೂ ಹೆಚ್ಚಿನ ಜನ ಸೇರಲಿದ್ದು, ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯ ಸುಗಮವಾಗಬೇಕು ಎಂದರು.