-ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜಿಸಿದ್ದು, ಈ ಹಿನ್ನೆಲೆ ಪ್ರೌಢಶಾಲೆ, ಪದವಿ ಪೂರ್ವ, ಪದವಿ-ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್, 09 ರಂದು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸೆಪ್ಟೆಂಬರ್, 10 ರಂದು ಸಂಜೆಯೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ತಮ್ಮ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸೆಪ್ಟೆಂಬರ್, 09 ರಂದು ಆಯಾಯ ಪ್ರೌಢಶಾಲೆ, ಕಾಲೇಜುಗಳಲ್ಲಿ ಅಥವಾ ತಾಲ್ಲೂಕು ಮಟ್ಟದಲ್ಲಿ ಪ್ರಬಂಧ