ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ನಟಿಯರ ಬಗ್ಗೆ ಕೆಟ್ಟದಾಗಿ ಕಮೆಂಟ್ ವಿಚಾರವಾಗಿ ಹಾಸನದಲ್ಲಿ ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ವಿಷಯಗಳಲ್ಲಿ ಈ ಹಿಂದಿನಿಂದಲೂ ಹೆಣ್ಣು ಮಕ್ಕಳೇ ಟಾರ್ಗೆಟ್ ಆಗುತ್ತಿದ್ದಾರೆ ಇದು ನಿಜಕ್ಕೂ ದುರದೃಷ್ಟಕರ ಸಮಾಜದಲ್ಲಿ ಗಂಡು ಹೆಣ್ಣು ಸಮಾನರು ಎಂದು ಎಷ್ಟೇ ಹೇಳಿದರು ಹೆಣ್ಣು ಮಕ್ಕಳು ಬಹಳ ಸುಲಭವಾಗಿ ಟಾರ್ಗೆಟ್ ಆಗುತ್ತಾರೆ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವಿಟಿ ಪಬ್ಲಿಸಿಟಿ ಹೆಚ್ಚಾಗುತ್ತಿದೆ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.