ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 24.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.89 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2656.81 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2642.19 ಮಿ.ಮೀ ಮಳೆಯಾಗಿತ್ತು.ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.95 ಮಿ.ಮೀ. ಕಳೆದ ವರ್ಷ ಇದೇ ದಿನ 1.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4006.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3799.21 ಮಿ.ಮೀ. ಮಳೆಯಾಗಿತ್ತು.