ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ದೇಶವನ್ನ ಮಾದರಿಯಾಗಿ ನಿರ್ಮಿಸುವಲ್ಲಿ ಟಂಕು ಕೊಟ್ಟಿ ನಿಲ್ಲುವ ಪ್ರತಿ ವ್ಯಕ್ತಿಯ ಹಿಂದೆ ಓರ್ವ ಆದರ್ಶ ಶಿಕ್ಷಕನ ನೆರಳಿರುವುದನ್ನ ಮರೆಯಲಾಗದು ಎಂದರು.