ಹಳೆ ಸರ್ಕಾರಕ್ಕಿಂತ ಈಗಿನ ಹೊಸ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಹೇಳಿದ್ದಾರೆ. ಬುಧವಾರ ಶಿವಮೊಗ್ಗ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಂಬತ್ತು ಇಲಾಖೆಗಳಿಂದ ಗುತ್ತಿಗೆದಾರರಿಗೆ 32 ಸಾವಿರ ಕೋಟಿಗೂ ಹೆಚ್ಚು ಹಣ ಕಳೆದ ಎರಡು ಮೂರು ವರ್ಷಗಳಿಂದ ಬಾಕಿ ಇದೆ.ಕಂಟ್ರಾಕ್ಟರ್ ಗಳು ತುಂಬಾ ಸಂಕಷ್ಟದಲ್ಲಿದ್ದಾರೆ.ಯಾರಿಗೂ ಪೇಮೆಂಟ್ ಆಗ್ತಿಲ್ಲ.20% ಕಮಿಷನ್ ನೀಡಿದ ಕೆಲವರಿಗೆ ಬಿಲ್ ಗಳು ಆಗ್ತಿದೆ ಎಂದು ಆರೋಪಿಸಿದ್ದಾರೆ.