ಹಾವೇರಿಯ ಸದಾಶಿವ ನಗರದಲ್ಲಿರುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಸ್ಥಳೀಯ ವಿಎಸ್.ಎಸ್.ಎಂ.ಬಿ ನಾಗರಿಕರ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಪ್ರತಿನಿತ್ಯ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಕೆಸರಿನಲ್ಲಿ ಓಡಾಡುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಅವಘಡ ಸಂಭವಿಸದ ರೀತಿಯಲಿ ಮುಂಜಾಗೃತಿ ತೆಗೆದುಕೊಂಡು ಈ ರಸ್ತೆ ಸರಿಪಡಿಸಬೇಕು ಎಂದು VSSMB ನಾಗರಿಕರ ಹಿತರಕ್ಷಣಾ ಸಮಿತಿ ಆಗ್ರಹಿಸಿದ್ದಾರೆ.