ಶಿರಾ ತಾಲೂಕಿನ ಗೌಡಗೆರೆ ಹೋಬಳಿಯಲ್ಲಿ ನೂತನ ನಾಡಕಚೇರಿ ಕಟ್ಟಡದ ಶಂಕುಸ್ಥಾಪನೆಗೆ ಬುಧವಾರ ಮಧ್ಯಾಹ್ನ 3 ಗಂಟೆಯಲ್ಲಿ ಶಾಸಕ ಟಿ.ಬಿ. ಜಯಚಂದ್ರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಏತ್ತಿನಹೊಳೆ ನೀರಾವರಿ ಯೋಜನೆಯಡಿಯಲ್ಲಿ ಶಿರಾ ಭಾಗಕ್ಕೆ ಲಭ್ಯವಾಗುವ ನೀರಿನಿಂದ ಎಲ್ಲಾ ಹಳ್ಳಿಗಳಿಗೆ ಶೋಧಿಸಿದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ 900 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ರೂಪಿಸಿ, ಕೇಂದ್ರ ಸರ್ಕಾರಕ್ಕೆ ನೆರವು ಕೋರಿ ಮನವಿ ಸಲ್ಲಿಸಲಾಗಿದೆ ಎಂದರು. ನಾಡಕಚೇರಿ ನಿರ್ಮಾಣದಿಂದ ರೈತರ ದಾಖಲೆಗಳ ಸುರಕ್ಷತೆ ಹಾಗೂ ಸಮಸ್ಯೆಗಳ ತ್ವರಿತ ಪರಿಹಾರ ಸಾಧ್ಯವಾಗಲಿದೆ ಎಂದು ತಿಳಿಸಿದರು. ಗೌಡಗೆರೆ ಕೆರೆಗೆ ನೀರು ಹರಿಸುವ ವಿಷಯದಲ್ಲೂ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರ