ಕಲಬುರಗಿ : ಕಲಬುರಗಿ ಜಿಲ್ಲೆ ಯಡ್ರಾಮಿ ಪಟ್ಟಣದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ಮುಸ್ಲಿಂ ಸಮುದಾಯದ ಯುವಕರು ಬಾಳೆಹಣ್ಣು ಸೇರಿದಂತೆ ಇತರೆ ಹಣ್ಣುಗಳನ್ನ ವಿತರಿಸಿ ಭಾವೈಕ್ಯತೆ ಮೆರೆದಿದ್ದಾರೆ.. ಸೆ6 ರಂದು ಬೆಳಗ್ಗೆ 9 ಗಂಟೆಗೆ ಮಾಹಿತಿ ಲಭ್ಯವಾಗಿದೆ. 9 ನೇ ದಿನದ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಸಾವಿರಾರೂ ಹಿಂದೂಗಳು ಭಾಗವಹಿಸಿದ್ದರು. ಈ ವೇಳೆ ಮುಸ್ಲಿಂರು ಬಾಳೆಹಣ್ಣು ಮತ್ತು ನೀರು ವಿತರಿಸಿ ನಾವೆಲ್ಲ ಒಂದೇ ಎಂಬ ಸಂದೇಶ ಸಾರಿದ್ದಾರೆ.