ಗಂಗಾವತಿ ನಗರದಲ್ಲಿ ಶುಕ್ರವಾರ ಮಧ್ಯರಾತ್ರಿ ಗಣೇಶ ಮೆರವಣಿಗೆ ನಡೆಯುತ್ತಿದ್ದ ವೇಳೆ ಪೊಲೀಸರು ಡಿಜೆ ಬಂದ್ ಮಾಡಿಸಿದ್ದಕ್ಕಾಗಿ, ಪೊಲೀಸರೊಂದಿಗೆ ಗಣಪತಿ ಭಕ್ತರು ವಾಗ್ವಾದ ಕೇಳಿದ್ದು ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಗಂಗಾವತಿ ನಗರದ ಗಾಂಧಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದ್ದು ಗಣೇಶ ಮೆರವಣಿಗೆ ಮಾಡುತ್ತಿದ್ದವರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.