ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಪ್ರಾಣಿ ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತಲೇ ಇದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಾಳ ಗಡಿ ಸುತ್ತಮುತ್ತ ಎರಡು ಕಾಡಾನೆಗಳು ಬೀಡು ಬಿಟ್ಟಿದ್ದು ಸ್ಥಳೀಯರಲ್ಲಿ ಆತಂಕವನ್ನು ಉಂಟು ಮಾಡಿವೆ. ಈ ಕಾಡಾನೆಗಳ ಜೋಡಿ ಬಾಳೆ ಕಾಫಿ ಅಡಿಕೆ ತೋಟಗಳನ್ನು ಪುಡಿ ಪುಡಿ ಮಾಡುತ್ತಿವೆ.