ಸಂಘಟನೆಯಿಂದ ವಿವಿಧ ಹಿಂದುಳಿದ ಸಮಾಜಗಳು ಅಭಿವೃದ್ಧಿ ಹೊಂದಲು ಸಾಧ್ಯವೆಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಅವರು ಹೇಳಿದರು. ಅವರು ಬುಧುವಾರ ದೇವದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ದೇವದುರ್ಗ ತಾಲೂಕ ಹಿಂದುಳಿದ ಜಾತಿಗಳ ಒಕ್ಕೂಟ ಪುನರ್ ರಚನೆ ಮತ್ತು ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ರಾಜ್ಯದಲ್ಲಿ ಹಲವಾರು ಹಿಂದುಳಿದ ಜಾತಿಗಳು ಸಂಘಟನೆ ಕೊರತೆಯಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿದ್ದು, ಜಿಲ್ಲೆಯಲ್ಲಿ ಹಿಂದುಳಿದ ಜಾತಿಗಳು ಅಭಿವೃದ್ಧಿ ಹೊಂದಲು ಸಂಘಟನೆ ಅನಿವಾರ್ಯವಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಕಳೆದ ಆರು ವರ್ಷಗಳಿಂದ ಸಂಘಟನೆಯನ್ನು ಬಲಪಡಿಸಲಾಗಿದ್ದು. ಎಲ್ಲ ತಾಲೂಕಿನಲ್ಲಿ ಒಕ್ಕೂಟಗಳನ್ನು ರಚನೆ ಮಾಡಲಾಗಿದೆ. ಎಲ್ಲ