ತಾಲ್ಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ರಸ್ತೆಯಲ್ಲಿ ಬಿದ್ದ ತಗ್ಗು-ಗುಂಡಿಗಳನ್ನು ವಿದ್ಯಾರ್ಥಿಗಳು ಮುಚ್ಚಿರುವ ಘಟನೆ ಶನಿವಾರ ನಡೆದಿದೆ. ರಸ್ತೆಯಲ್ಲಿ ಬಿದ್ದಿರುವ ತಗ್ಗು-ಗುಂಡಿಗಳು ಮುಚ್ಚುವಂತೆ ಗ್ರಾಪಂ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರು, ಅಧಿಕಾರಿಗಳು ಗಮನಹರಿಸದೆ ಇರುವುದರಿಂದ ವಿದ್ಯಾರ್ಥಿಗಳು ಪೋಷಕರೊಂದಿಗೆ ಎತ್ತಿನಗಾಡಿಯಲ್ಲಿ ಮಣ್ಣು ತುಂಬಿಕೊಂಡು ಬಂದು ರಸ್ತೆಯಲ್ಲಿ ಬಿದ್ದ ತಗ್ಗು-ಗುಂಡಿಗಳು ಮುಚ್ಚಿದ್ದಾರೆ. ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚಿಗೆ ವ್ಯಕ್ತವಾಗಿದೆ.