ಸಿದ್ದಾಪುರ: ನಮ್ಮ ಭಾರತೀಯ ಸನಾತನ ಸಂಸ್ಕೃತಿ ಎಂದೂ ಬಿಡುವ ಸಂಸ್ಕೃತಿಯಲ್ಲ. ಈ ನಿಟ್ಟಿನಲ್ಲಿ ನಮ್ಮ ಸನಾತನ ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅದನ್ನು ನಮ್ಮ ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವು ನೀವೆಲ್ಲರೂ ಅತ್ಯಂತ ಶ್ರದ್ಧಾಪೂರ್ವಕವಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಶ್ರೀಮನ್ನೆಲೆಮಾವು ಮಠದ ಶ್ರೀಮಾಧವಾನಂದ ಭಾರತೀ ಮಹಾ ಸ್ವಾಮೀಜಿಗಳು ನುಡಿದರು. ಅವರು ಇಂದು ಶನಿವಾರ ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಶ್ರೀಮನ್ನೆಲೆಮಾವು ಮಠದಲ್ಲಿ ವಿಶ್ವಶಾಂತಿ ಸೇವಾ ಟ್ರಸ್ಟ್, ಅವಿನಾಶಿ ಸಂಸ್ಥೆ, ಲಕ್ಷ್ಮೀನರಸಿಂಹ ಸಂಸ್ಕೃತಿ ಸಂಪದ ಟ್ರಸ್ಟ್ ಗಳ ಸಹಕಾರದಲ್ಲಿ ಹಮ್ಮಿಕೊಂಡ 'ಶ್ರೀಮಾಧವಾರ್ಪಣಂ' ಕಾರ್ಯಕ್ರಮದಲ್ಲಿ ಸಾನ್ನಿಧ್ಯ ನೀಡಿ ಆಶೀರ್ವಚನ ನೀಡಿ ಮಾತನಾಡುತ್ತಿದ್ದರು.