ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಫೆವಾರ್ಡ್ ಕ ಕಾರ್ಯಕ್ರಮ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ ಕರ್ನಾಟಕ ನಗರ ಮತ್ತು ಗ್ರಾಮಾಭ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ವತಿಯಿಂದ ಮೈಸೂರು ವಿಭಾಗೀಯ ಆರು ಜಿಲ್ಲೆಗಳ ಸ್ವಯಂ ಸೇವಾ ಸಂಸ್ಥೆಗಳ ಐದು ವರ್ಷಗಳ ಕಾರ್ಯತಂತ್ರ ನೀತಿ ನಿರೂಪಣ ಕಾರ್ಯಾಗಾರವನ್ನು ಆ.29 ರಂದು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ತಿಳಿಸಿದರು