ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಅವರನ್ನು ರಾಜ್ಯ ಸರ್ಕಾರವುಮಂಗಳವಾರ ಮದ್ಯಾದ್ನ 2ಗಂಟೆಗೆ ವರ್ಗಾವಣೆ ಮಾಡಿದೆ. ನೂತನ ಜಿಲ್ಲಾಧಿಕಾರಿಗಳನ್ನಾಗಿ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ ಅವರನ್ನು ವರ್ಗಾಯಿಸಿದೆ ಬಳ್ಳಾರಿಯ ನೂತನ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅವರು ಒಂದೆರಡು ದಿನಗಳಲ್ಲಿಯೇ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಹಾಲಿ ಬಳ್ಳಾರಿ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಶಾಂತ್ ಕುಮಾರ್ ಮಿಶ್ರ ಅವರಿಗೆ ಯಾವುದೇ ಸ್ಥಳ ನಿಯೋಜನೆಗೊಳಿಸಿಲ್ಲ. (ಸ್ಥಳ ತೋರಿಸಿಲ್ಲ).