ಅತಿವೃಷ್ಟಿ ಹಿನ್ನೆಲೆಯಲ್ಲಿ ತಾಲ್ಲೂಕು ಸಾವಳಿಯಲ್ಲಿ ಆಗಿರುವ ಬೆಳೆ ಹಾನಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸೋಮವಾರ ಮಧ್ಯಾಹ್ನ 1:30ಕ್ಕೆ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಶಾಸಕರಾದ ಪ್ರಭು ಚೌಹಾಣ್, ಶರಣು ಸಲಗರ್, ಡಾ. ಶೈಲೇಂದ್ರ ಬೆಲ್ದಾಳೆ , ಬಿಜೆಪಿ ಜಿಲ್ಲಾಧ್ಯಕ್ಷ ಸುಮನಾಥ ಪಾಟೀಲ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.