ಬೈಕ್, ಸ್ಕೂಟರ್‌ಗಳನ್ನ ಕಳ್ಳತನ ಮಾಡಿ ವೀಲಿಂಗ್ ಮಾಡುತ್ತಿದ್ದ ಆರೋಪಿಯನ್ನ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ವಿಲ್ಸನ್ ಗಾರ್ಡನ್ ನಿವಾಸಿ ಸಲೀಂ ಪಾಷಾ ಬಂಧಿತ ಆರೋಪಿಯಾಗಿದ್ದು, ಆತನಿಂದ 18 ಲಕ್ಷ ರೂ ಮೌಲ್ಯದ 20 ದ್ವಿಚಕ್ರ ವಾಹನಗಳು ಹಾಗೂ 1 ಆಟೋರಿಕ್ಷಾವನ್ನ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಕುರಿತು ಸೆಪ್ಟೆಂಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಮಾಹಿತಿ ನೀಡಿದ ಪೊಲೀಸರು, 'ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿಯುತ್ತಿದ್ದ ಆರೋಪಿ, ಅವುಗಳನ್ನ ಬಳಸಿ ವೀಲಿಂಗ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡುತ್ತಿದ್ದ. ನಂತರ ಆ ದ್ವಿಚಕ್ರ ವಾಹನಗಳನ್ನ ಅಜ್ಞಾತ ಸ್ಥಳಗಳಲ್ಲಿ ಪಾರ್ಕ್ ಮಾಡುತ್ತಿದ್ದ.ಮನೆಗೆ ಹೋದರೆ ಪೊಲೀಸರು ಹುಡುಕಿಕೊಂಡು ಬರಬಹುದು ಎಂದು ಕದ್ದ ಆಟೋದಲ್ಲಿಯೇ ವಾಸ್ತವ್ಯ ಹೂಡುತ್ತಿದ್ದ'