ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ಸಾಲಿಗೆಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಬೆಳಿಗ್ಗೆ11:30ಕ್ಕೆ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಂತರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾರರವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಪದಾಧಿಕಾರಿಗಳು ಕರ್ನಾಟಕ ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮ ಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ. ರಾಜ್ಯದ ಪದವಿ ಕಾಲೇಜು