ಅಪರಿಚಿತ ವಾಹನ ಡಿಕ್ಕಿ ಹೊಡೆದು ದಂಪತಿಗಳೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರ ಕ್ರಾಸ್ ಹತ್ತಿರ ಬುಧುವಾರ ಸಾಯಂಕಾಲ 5ಗಂಟೆ ಸುಮಾರಿಗೆ ನಡೆದಿದೆ. ಗಂಭೀರವಾಗಿ ಗಾಯಗೊಂಡವರು ಕಾಖಂಡಕಿ ಗ್ರಾಮದ ನಿವಾಸಿಗಳು ಎಂದು ಗುರುತು ಪತ್ತೆ ಹಚ್ಚಲಾಗಿದೆ. ದಂಪತಿಗಳಿಬ್ಬರು ಜಮಖಂಡಿ ರಸ್ತೆಯಲ್ಲಿ ದ್ವಿಚಕ್ರ ವಾಹನದ ಮೇಲೆ ತರುತ್ತಿರುವ ಸಂದರ್ಭದಲ್ಲಿ ರಭಸವಾಗಿ ಬಂದಂತಹ ಇನ್ನೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಸರಿಯಾಗಿ ಆಸ್ಪತ್ರೆಗೆ ರವಣಿಸಲಾಗಿದ್ದು, ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.