ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಪಕ್ಷದಿಂದ ಯಾದಗಿರಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸೋಮವಾರ ಮಧ್ಯಾಹ್ನ ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಧರ್ಮಸ್ಥಳದ ಕುರಿತು ಸುಳ್ಳು ಅಪಪ್ರಚಾರ ಮಾಡುತ್ತಿರುವವರು ಯಾರೇ ಆಗಿದ್ದರು ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರಾದ ರಾಚನಗೌಡ ಮುದ್ನಾಳ, ಮಹೇಶ್ ರೆಡ್ಡಿ ಮುದ್ನಾಳ ಸೇರಿದಂತೆ ಅನೇಕ ಮುಖಂಡರು ನೂರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.