ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಇಡಿಯಿಂದ ಬಂಧನವಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರನ್ನ ಬೆಂಗಳೂರಿಗೆ ಕರೆತರಲಾಗಿದೆ.ಆಗಸ್ಟ್ 24ರಂದು ಮಧ್ಯಾಹ್ನ 12ರ ನಂತರ ಅವರನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಇಡಿ ಅಧಿಕಾರಿಗಳು ಸಜ್ಜಾಗಿದ್ದಾರೆ.ಸಿಕ್ಕಿಂನ ಗ್ಯಾಂಗ್‌ಟೋಕ್‌ನಲ್ಲಿ ವ್ಯವಹಾರಕ್ಕೆ ಸಂಬಂಧಿಸಿದ ಮಾತುಕತೆಗೆ ತೆರಳಿದ್ದ ವೀರೇಂದ್ರ ಅವರನ್ನ ಶನಿವಾರ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಸ್ಥಳಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಟ್ರಾನ್ಸಿಟ್ ರಿಮಾಂಡ್ ಪಡೆದು ತಡರಾತ್ರಿ ಬೆಂಗಳೂರಿಗೆ ಕರೆತರಲಾಗಿತ್ತು.