ಕಲಬುರಗಿ : 2025-26 ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಕಲಬುರಗಿ ನಗರದಲ್ಲಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ.. ಆ22 ರಂದು ಮಧ್ಯಾನ 12 ಗಂಟೆಗೆ ನಗರದ ಡಿಸಿ ಕಚೇರಿ ಬಳಿ ವಿದ್ಯಾರ್ಥಿಗಳೊಂದಿಗೆ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದ್ದು, ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೇ ಶೈಕ್ಷಣಿಕ ಚಟುವಟಿಕೆಗಳಿಗೆ ಹೊಡೆತ ಬಿಳಿತ್ತಿದ್ದು, ಈ ಕೂಡಲೇ ರಾಜ್ಯ ಸರ್ಕಾರ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನ ನೇಮಕ ಮಾಡಿಕೊಳ್ಳುವಂತೆ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು