ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ ನಡೆದಿದ್ದು, ತರಕಾರಿ ಅಂಗಡಿಗೆ ರಾತ್ರೋ ರಾತ್ರಿ ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 50 ಸಾವಿರ ರೂ ಬೆಲೆಬಾಳುವ ತರಕಾರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಬುಧವಾರ ರಾತ್ರಿ 1:30 ರ ಸುಮಾರಿಗೆ ಜ್ಞಾನ ಭಾರತಿ ನಗರದ ಬಳಿ ಕಿಡಿಗೇಡಿಗಳು ಈ ಕೃತ್ಯ ಮಾಡಿದ್ದು, ನಂತರ ಸ್ಥಳೀಯರು ಗಮನಿಸಿ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿದ್ದಾರೆ ಇನ್ನು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಭಲೆ ಬೀಸಿದ್ದಾರೆ.