ಬೇಲೂರು: ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ನಾವು ಓದಲು ಬಂದಿದ್ದೇನೆ, ಓದಬೇಕು ಎನ್ನುವ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠ ಪರಮಪೂಜ್ಯ ಶ್ರೀ ಶ್ರೀ ಶುಂಭನಾಥ ಮಹಾಸ್ವಾಮಿಗಳು ಹೇಳಿದರು. ಬೇಲೂರು ಪಟ್ಟಣದ ಜೆಪಿನಗರದಲ್ಲಿರುವ ಅರ್ವಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ವತಿಯಿಂದ ನಡೆದ ಗುರುವಂದನಾ, ಪ್ರತಿಭಾ ಪುರಸ್ಕಾರ ಹಾಗೂ ಸಿಈಟಿ, ನೀಟ್ ತರಗತಿ ಕಾರ್ಯಕ್ರಮ ಉದ್ಘಾಟನೆ ನಡೆಸಿ ಮಾತನಾಡಿದರೂ.