ನಾಯಕನಹಟ್ಟಿ ಪಟ್ಟಣದಲ್ಲಿ ಸೆ.04 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ನಡೆಯುವ ಹಿನ್ನಲೆ ಬುಧವಾರ ಎಸ್ಪಿ ರಂಜಿತ್ ಕುಮಾರ ಬಂಡಾರು ನೇತೃತ್ವದಲ್ಲಿ ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದ್ದಾರೆ. ನಂತರ ಪೊಲೀಸ್ ಠಾಣಾ ಆವರಣದಲ್ಲಿ ಎಸ್ಪಿ ಮಾತನಾಡಿ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುವುದು.ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ, ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಡಿವೈಎಸ್ ಪಿ ರಾಜಣ್ಣ ಇದ್ದರು.