ಧಾರವಾಡ ತಾಲೂಕಿನ ಬೆಳೆ ಹಾನಿ ಪ್ರದೇಶಗಳಿಗೆ ಸೋಮವಾರ ಮಧ್ಯಾಹ್ನ 1 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಧಾರವಾಡ ತಾಲೂಕಿನ ಮಾರಡಗಿ, ಶಿವಳ್ಳಿ, ಹೆಬ್ಬಳ್ಳಿ, ಅಮ್ಮಿನಭಾವಿ, ಮರೇವಾಡ ಸೇರಿದಂತೆ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆ ಹಾನಿ ಮತ್ತು ಬೆಳೆ ಹಾನಿ ಪ್ರದೇಶಗಳನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.