ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 10 ಮತ್ತು 11 ರಂದು ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗುವುದು. ತಾಲ್ಲೂಕು ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿದ್ದು, ಆನ್‌ಲೈನ್ /ಸ್ಕ್ಯಾನ್ ಮೂಲಕ ನೊಂದಣೆ ಮಾಡುವುದು ಕಡ್ಡಾಯವಾಗಿರುತ್ತದೆ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ಹಾಗೂ ಊಟೋಪಹಾರವನ್ನು ನೀಡಲಾಗುವುದು.