ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ವಿಜಯಪುರ ನಗರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಗುರುವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುತ್ತಿರುವುದನ್ನು ಕೂಡಲೇ ಕೈಬಿಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ತೆರಳಿ ಬೃಹತ್ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕೂಡಲೇ ನಿರ್ಧಾರ ಕೈ ಬಿಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ವಿಜಯಪುರ ಜಿಲ್ಲೆ ಬಂದು ಕರೆ ನೀಡಿದ್ದೇವೆ ಎಂದು ಎಚ್ಚರಿಕೆ ನೀಡಿದರು.